ಉಡುಪಿ :ಎಂ.ಆರ್.ಪಿ.ಎಲ್ ಹಾಗೂ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳ ಹಸ್ತಾಂತರ ನಡೆಯಿತು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ವಾಹನಗಳನ್ನು ಇಲಾಖೆಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ಎಜಿಎಂ ರಮೇಶ್ ವೈದ್ಯರನ್ನು ಗೌರವಿಸಲಾಯಿತು.
ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




