Home Crime ಕಾರ್ಕಳದ ರೌಡಿ ಶೀಟರ್ ಸೋಮನಾಥ @ ಸೋಮುಗೆ ಗಡಿಪಾರು ಆದೇಶ…!!

ಕಾರ್ಕಳದ ರೌಡಿ ಶೀಟರ್ ಸೋಮನಾಥ @ ಸೋಮುಗೆ ಗಡಿಪಾರು ಆದೇಶ…!!

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೋಮನಾಥ @ ಸೋಮು (40) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ.

ಕುಂಬ್ರಪದವು, ತೆಳ್ಳಾರು ರಸ್ತೆ, ಕಸಬ ಗ್ರಾಮದ ನಿವಾಸಿಯಾಗಿರುವ ಸೋಮನಾಥ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಏಪ್ರಿಲ್ 30ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಸೋಮನಾಥನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.