Home Dskshina Kannada ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

 

ಬೆಂಗಳೂರು: ತಮ್ಮ ವಿರುದ್ಧದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

 

​ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.

 

ಗಡಿಪಾರು ಆದೇಶವನ್ನು ಪ್ರಶ್ನಿಸಿ ನೇರವಾಗಿ ರಿಟ್ ಅರ್ಜಿ ಸಲ್ಲಿಸುವುದು ಸಮಂಜಸವಲ್ಲ. ಸರ್ಕಾರದ ಗೃಹ ಕಾರ್ಯದರ್ಶಿಯವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದರಿಂದ, ಅರ್ಜಿದಾರರು ಆ ಮಾರ್ಗವನ್ನು ಅನುಸರಿಸಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

 

​ಆದಾಗ್ಯೂ, ಮುಂದಿನ ಎರಡು ವಾರಗಳವರೆಗೆ ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಇದೇ ವೇಳೆ ಸೂಚನೆ ನೀಡಿದೆ.

 

​ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ವಿರುದ್ಧ ಕೃತಕ ಬುದ್ಧಿಮತ್ತೆ (AI) ಬಳಸಿ ಅವಹೇಳನಕಾರಿ ಫೋಟೋ ಮತ್ತು ಕಂಟೆಂಟ್ ಸೃಷ್ಟಿಸಿ ಹಂಚಿಕೆ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಕ್ರಮ ಕೈಗೊಂಡಿದೆ.

 

​ಈ ವಿಚಾರವಾಗಿ ರಾಜ್ಯ ಸರ್ಕಾರ, ಗೂಗಲ್, ಮೆಟಾ (ಫೇಸ್‌ಬುಕ್, ಇನ್‌ಸ್ಟಾಗ್ರಾಮ್) ಹಾಗೂ ವಾಟ್ಸಾಪ್ ವೇದಿಕೆಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಧರ್ಮಸ್ಥಳದ ಪರವಾಗಿ ವಕೀಲ ಎಸ್. ರಾಜಶೇಖರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.