Home Karkala News ಅಜೆಕಾರು: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಅಜೆಕಾರು: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಅಜೆಕಾರು: ದೀರ್ಘಕಾಲದ ಅನಾರೋಗ್ಯದಿಂದ ಬೇಸತ್ತು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಸಮೀಪದ ಪಡುಕುಡೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕೃಷ್ಣ ಬಿ. ಶೆಟ್ಟಿ ಎಂದು ಗುರುತಿಸಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ, ಕೃಷ್ಣ ಬಿ. ಶೆಟ್ಟಿ ಅವರು ಸುಮಾರು 15 ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ವಿವಿಧ ರೀತಿಯ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ.

ದಿನಾಂಕ 30/04/2026 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಕೊಟ್ಟಿಗೆಯ ಜಂತಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಅವರ ಪುತ್ರ ಅರುಣ್‌ ಶೆಟ್ಟಿ (42) ಅವರು ನೀಡಿದ ದೂರಿನ ಆಧಾರದ ಮೇಲೆ ಅಜೆಕಾರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.