ಕಡಬ: ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ (37) ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಮೃತರು ನೂಜಿಬಾಳ್ತಿಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದರು ಎನ್ನಲಾಗಿದೆ.
ಮೇ, 1 ರಂದು ಕಟ್ಟಡದ ಮಾಲೀಕರು ರವಿಚಂದ್ರ ಎನ್ನುವವರಿಗೆ ಕರೆ ಮಾಡಿ, ತಂದೆಯವರು ವಾಸವಿದ್ದ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯವನ್ನು ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪುತ್ರ ರವಿಚಂದ್ರ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




