Home Crime ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದು ಮೃತ್ಯು…!!

ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದು ಮೃತ್ಯು…!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುಂಜಾಲಕಟ್ಟೆ ಎಂಬಲ್ಲಿ ಹೆದ್ದಾರಿ ರಸ್ತೆಯನ್ನು ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.

ಸಾವನ್ನಪ್ಪಿದ ಮಹಿಳೆ ಸುನಂದಲತಾ ಎಂದು ತಿಳಿಯಲಾಗಿದೆ.

ಈ ಘಟನೆ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ : ಪಿರ್ಯಾದಿದಾರರಾದ ಇಸ್ಮಾಯಿಲ್, ಪ್ರಾಯ: 31 ವರ್ಷ, ತಂದೆ: ದಿ. ಹಸನಬ್ಬ, ವಾಸ: ಪೊಮ್ಮಾಜೆ ಮನೆ, ಮಾಲಾಡಿ ಗ್ರಾಮ, ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ದಿನಾಂಕ: 26-08-2025 ರಂದು ಬೆಳಿಗ್ಗೆ 07.40 ಗಂಟೆಗೆ ಬೆಳ್ತಂಗಡಿ ತಾಲೂಕು ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿರುವ ಬಳ್ಳಮಂಜಕ್ಕೆ ಹೋಗುವ ರಸ್ತೆ ಬಳಿಯಿಂದ ಪಾದಚಾರಿ ಮಹಿಳೆಯಾದ ಸುನಂದಲತಾ (55) ಎಂಬವರು ಹೆದ್ದಾರಿ ರಸ್ತೆ ಬಳಿಗೆ ನಡೆದುಕೊಂಡು ಬಂದು ಹೆದ್ದಾರಿ ರಸ್ತೆಯನ್ನು ದಾಟುತ್ತಿದ್ದಾಗ, ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ತುಳುನಾಡು ಎಂಬ ಹೆಸರಿನ KA 20 AC 7288 ನೇ ನಂಬ್ರದ ಖಾಸಗಿ ಬಸ್ಸನ್ನು ಅದರ ಚಾಲಕನಾದ ಮಹಮ್ಮದ್‌ ಶರೀಫ್‌ ಎಂಬಾತನು ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಮಹಿಳೆ ಸುನಂದ ಲತಾರವರಿಗೆ ಢಿಕ್ಕಿ ಹೊಡೆಸಿದ್ದು, ಮಹಿಳೆಯು ರಸ್ತೆಗೆ ರಟ್ಟಿ ಬಿದ್ದ ಪರಿಣಾಮ ಮಹಿಳೆಯ ತಲೆಗೆ ಗಂಭೀರವಾದ ರಕ್ತ ಗಾಯವಾದವರನ್ನು ಆಂಬ್ಯುಲೆನ್ಸ್ ಒಂದರಲ್ಲಿ ಬೆಳ್ತಂಗಡಿ ಅಭಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿ ಅಲ್ಲಿ ಪರೀಕ್ಷಿಸಿದ ವೈದ್ಯರು ಸುನಂದಲತಾರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 51/2025 ಕಲಂ: 281, 106 BNS- 2023ಯಂತೆ ಪ್ರಕರಣ ದಾಖಲಾಗಿರುತ್ತದೆ.