ಕೊಲ್ಲೂರು: ತೋಟದಲ್ಲಿ ದನಗಳಿಗೆ ಹುಲ್ಲು ಕೊಯ್ಯಲು ತೆರಳಿದ್ದ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಕೆರಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪ್ರೇಮ ಶೆಡ್ತಿ (47) ಎಂದು ಗುರುತಿಸಲಾಗಿದೆ. ಇವರು ಮೇ 1ರಂದು ಸಂಜೆ 6ರಿಂದ 7 ಗಂಟೆಯ ನಡುವೆ ಮನೆಯ ಪಕ್ಕದ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಬಲ ಕಾಲಿಗೆ ಏನೋ ಕಚ್ಚಿದ ಅನುಭವವಾಗಿದ್ದು, ಬಳಿಕ ಮನೆಗೆ ಬಂದು ಪರಿಶೀಲಿಸಿದಾಗ ಕಾಲಿನ ಎರಡು-ಮೂರು ಕಡೆ ಹಾವು ಕಚ್ಚಿದ ರೀತಿಯ ಗಾಯಗಳು ಕಂಡು ಬಂದಿವೆ ಎನ್ನಲಾಗಿದೆ.
ತಕ್ಷಣ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರಾತ್ರಿ 9.30ರ ಸುಮಾರಿಗೆ ಕರೆದುಕೊಂಡು ಹೋದಾಗ ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.





