ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಗ್ರಾಮದ ಮೇಲ್ಪಟೆ ನಿವಾಸಿ ಸುರೇಶ್ (58) ಅವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಕಾಯಿಲೆಯಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಈ ಕುರಿತು ಮೃತರ ಪುತ್ರ ಸೂರಜ್ (25) ಅವರು ನೀಡಿದ ದೂರಿನ ಪ್ರಕಾರ, ದಿನಾಂಕ 02/05/2026 ರಂದು ಸಂಜೆ 4:15ರಿಂದ 4:30ರ ಅವಧಿಯಲ್ಲಿ ಮನೆಯ ಕೊಠಡಿಯಲ್ಲಿ ಮೇಲಿನ ಪಕ್ಕಾಸಿಗೆ ಶಾಲ್ ಕಟ್ಟಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುರೇಶ್ ಅವರು ಮೃತಪಟ್ಟಿರುವುದು ಕಂಡುಬಂದಿದೆ.
ಘಟನೆ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





