ಉಡುಪಿ: ನವರಸ ನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಇಂದು (03.05.2026) ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಜಗ್ಗೇಶ್ ಅವರಿಗೆ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಅಧ್ಯಕ್ಷ ಗಿರಿಧರ್ ಸುವರ್ಣ, ಶೇಖರ್ ಪುತ್ರನ್, ಪುರೋಹಿತರಾದ ಶ್ರೀನಿವಾಸ್ ಉಪಾಧ್ಯಾಯ, ಶ್ರೀಷ ಉಪಾಧ್ಯಾಯ, ಪದ್ಮನಾಭ ಕೋಟ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






