ಕಾಪು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಾಂಗಾಳ ಗ್ರಾಮದ ಜಾಸ್ಮೀನ್ ಪ್ಲವರ್ ಸ್ಟಾಲ್ ಬಳಿ ರಾ. ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಮೃತರನ್ನು ಮೈಲಾರಪ್ಪ(53) ಎಂದು ತಿಳಿಯಲಾಗಿದೆ.
ಇವರು ಕೆಲಸ ನಿಮಿತ್ತ ಉಡುಪಿಯಿಂದ ಕಾಪು ಕಡೆಗೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.