ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೇ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಈ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.