ಕಾಸರಗೋಡು: ಉಪ್ಪಳ ಗೇಟ್ ಬಳಿ ಕಾರು ಮತ್ತು ಸ್ಕೂಟರ್ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ತಲಪಾಡಿಯ ಅಬ್ದುಲ್ ಹಮೀದ್ (48) ಎಂದು ಗುರುತಿಸಲಾಗಿದೆ.
ಸ್ಕೂಟರ್ ಚಲಾಯಿಸಿದ ಅಜೀಸ್ ಅಹಮ್ಮದ್ ( 41) ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತಲಪಾಡಿ ಕಡೆಯಿಂದ ಉಪ್ಪಳಕ್ಕೆ ಬರುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಹಮೀದ್ ರನ್ನು ಉಪ್ಪಳದ ಆಸ್ಪತ್ರೆಗೆ ತಲಪಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.