ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ನಿಷೇಧಿತ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಬ್ಬರು ಬಂಧಿತ ಆರೋಪಿಗಳು ಮುಜಾಂಬಿಲ್ ಮತ್ತು ಮಹಮ್ಮದ್ ಆಶ್ರಫ್ ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ದಿನಾಂಕ 27-08-2025 ರಂದು ಮಧ್ಯಾಹ್ನ 3-30 ಗಂಟೆಯ ಸಮಯಕ್ಕೆ ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಮುಳ್ಳುಗುಡ್ಡೆ ಆಟದ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳಾದ ಮುಜಾಂಬಿಲ್ ಮತ್ತು ಮಹಮ್ಮದ್ ಆಶ್ರಫ್ ಎಂಬವರು ನಿಷೇಧಿತ ಮಾದಕ ವಸ್ತುವನ್ನು ಸೇವಿಸಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದವರನ್ನು ಉಳ್ಳಾಲ ಠಾಣಾ ಪಿ.ಎಸ್.ಐ ಸಿದ್ದಪ್ಪ ಮಾರುತಿ ನರನೂರ ರವರು ಸಿಬ್ಬಂದಿಯವರ ಜೊತೆಯಲ್ಲಿ ಪತ್ತೆ ಮಾಡಿ ಕೋಟೆಕಾರ್ ಗ್ರಾಮದ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈಧ್ಯಾಧಿಕಾರಿಯವರ ಮುಂದೆ ಕೋರಿಕೆ ಪತ್ರದೊಂದಿಗೆ ಹಾಜರುಪಡಿಸಿ ವೈಧ್ಯಕೀಯ ತಪಾಸಣೆಗೆ ಒಳಪಡಿಸಿದಂತೆ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದಾಗಿ ಸದ್ರಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಅಭಿಪ್ರಾಯದೊಂದಿಗೆ ದೃಢಪತ್ರ (ಟೋಕ್ಸಿಕಾಲಜಿ ಅನಾಲೈಸಿಸ್ ರಿಪೋರ್ಟ್) ನೀಡಿರುವುದನ್ನು ಪಡೆದುಕೊಂಡು ಆರೋಪಿಗಳ ವಿರುದ್ದ ದಾಖಲಿಸಿಕೊಂಡ ಪ್ರಕರಣದ ಸಾರಾಂಶ.
