ನೆಲ್ಯಾಡಿ: ಆಟೋ ಚಾಲಕರೊಬ್ಬರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡವರು ಶಿರಾಡಿ ಗ್ರಾಮದ ಅಡ್ಡಹೊಳೆಯ ಅನಿತೋಟ ನಿವಾಸಿ, ಆಟೋ ಚಾಲಕ ಹರಿದಾಸ (63) ಎಂದು ತಿಳಿದು ಬಂದಿದೆ.
ಹರಿದಾಸ ಅವರು ಮೇ.3ರ ರಾತ್ರಿ ಎಂದಿನಂತೆ ಊಟ ಮಾಡಿ ಮನೆಯಲ್ಲಿ ಮಲಗಿದ್ದರು. ಆದರೆ ಸೋಮವಾರ ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಅವರು ಮನೆಯಲ್ಲಿ ಕಾಣಿಸದೇ ಇದ್ದರು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದ ವೇಳೆ, ಮನೆಯಿಂದ ಸುಮಾರು 20 ಮೀಟರ್ ದೂರದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.





