ಬ್ರಹ್ಮಾವರ: ಕಾರಿನಲ್ಲಿ ಬಂದ ಯುವಕರು ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ನಿನ್ನೆ ಬ್ರಹ್ಮಾವರದಲ್ಲಿ ನಡೆದಿದೆ.
ವಾರಂಬಳ್ಳಿ ಗ್ರಾಮದ ಪದ್ಮ(70) ಎಂಬವರು ಮನೆಯ ಕಂಪೌಂಡಿನ ಹೊರಗಡೆ ಹೂವುಗಳನ್ನು ಕೊಯ್ಯುತ್ತಿರುವಾಗ ಕಾರಿನಲ್ಲಿ ಬಂದ ಎರಡು ಮೂರು ಮಂದಿ, ಪದ್ಮ ಅವರಿಗೆ ಹಲ್ಲೆ ನಡೆಸಿ, ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಮ್ ತೂಕದ 2, 50, 000 ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಸಿದುಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.