Home Crime ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲು…!!

ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲು…!!

ಚಿಕ್ಕಮಗಳೂರು : ಬಾತುಕೋಳಿ ಹಿಡಿಯಲು ಹೋದ 5 ರಿಂದ 6 ವರ್ಷ ವಯಸ್ಸಿನ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಓರ್ವ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಎಂಬ ಬಾಲಕ ಪಾರಾಗಿದ್ದಾನೆ.

ಸಂಬಂಧಿಕರ ಮನೆಗೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೆರೆಗೆ ಇಳಿದಿದ್ದ ಬಾತುಕೋಳಿಯನ್ನು ಹಿಡಿಯಲು ಹೋದ ಮಕ್ಕಳು ನೀರಿನ ಆಳ ತಿಳಿಯದೆ ಕೆರೆಗೆ ಇಳಿದಿದ್ದಾರೆ. ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನಾಲ್ವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.