ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಆ. 30ರ ಶನಿವಾರದಂದು ರಜೆಯನ್ನು ಘೋಷಿಸಲಾಗಿರುತ್ತದೆ.
ಅಲ್ಲದೇ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.