ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಪಕ್ಷದ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಲಕ್ಷ್ಮೀಶ್ ಶೆಟ್ಟಿ, ಸುರೇಂದ್ರ ಆಚಾರ್ಯ, ವಿಲ್ಸನ್, ಸೂರಜ್ ಕರ್ಕೇರ, ಯುವ ಕಾಂಗ್ರೆಸ್‌ನ ಹಮ್ಮದ್, ಆಫ್ರಿದ್, ಅಕ್ಷಿತ್ ಪೈ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.




