Home Latest ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬ್ರಹ್ಮಾವರ: ಬ್ರಹ್ಮಾವರದ ಕೃಷಿ ಕೇಂದ್ರದ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

 

ಮೃತರನ್ನು ನೇಪಾಳದ ಮದನ್ ಕುಮಾರ್ ಎಂದು ಗುರುತಿಸಲಾಗಿದೆ.

 

ಇವರು ಬೆಂಗಳೂರಿನಿಂದ ಎ.29ರಂದು ಸ್ನೇಹಿತನನ್ನು ಭೇಟಿ ಮಾಡಲು ಬ್ರಹ್ಮಾವರಕ್ಕೆ ಬಂದಿದ್ದು, ಅಲ್ಲಿಂದ ಚೇರ್ಕಾಡಿಗೆ ಹೋಗಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು ಎಂದು ತಿಳಿದು ಬಂದಿದೆ.

 

ಘಟನೆಯಿಂದ ಗಂಭೀರವಾಗಿ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಆದರೆ ಇವರು ಚಿಕಿತ್ಸೆ ಫಲಕಾರಿಯಾಗದೆ ಮೇ 3ರಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

ಈ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.