Home Dskshina Kannada ಬೆಳ್ತಂಗಡಿ: ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ತಾಲೂಕಿನ ಬೆಳಾಲು ಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಕೂಟ‌ರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

 

ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಎಂದು ಗುರುತಿಸಲಾಗಿದೆ.

 

ಇವರು ಕಳೆದ ಕೆಲವು ಸಮಯದಿಂದ ಬೆಳಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

 

ಇಂದು ಮಧ್ಯಾಹ್ನ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಹಿಂಬದಿಯಿಂದ ಬಂದ ಕ್ರೇನ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

 

ಡಿಕ್ಕಿಯ ರಭಸಕ್ಕೆ ಜಯ ಮೇಸ್ತ್ರಿ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.