ಉಳ್ಳಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಯಜ್ನೇಶ್ (31) ಆತ್ಮಹತ್ಯೆಗೈದ ಯುವಕನಾಗಿದ್ದಾನೆ.
ಯಜ್ನೇಶ್ ಅವಿವಾಹಿತನಾಗಿದ್ದು ನಿರ್ದಿಷ್ಟ ಕೆಲಸವಿಲ್ಲದೆ ಜಿಗುಪ್ಸೆಗೊಂಡಿದ್ದನಂತೆ. ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸಂಜೆ ವೇಳೆ ಯಜ್ನೇಶ್ ತಾಯಿ ಮತ್ತು ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.




