ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿ ಆಟೋ ಚಾಲಕನಿಗೆ ಅಪರಿಚಿತರು ಇರಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ.
ಮೂತ್ರ ವಿಸರ್ಜನೆ ಗೆಂದು ಅಟೋ ನಿಲ್ಲಿಸಿದ್ದ ವೇಳೆ ವ್ಯಕ್ತಿಯೊಬ್ಬ ಬಂದು ಪೊಲೀಸರಿಗೆ ಯಾಕೆ ಮಾಹಿತಿ ನೀಡುತ್ತಿದ್ದಿ ಎಂದು ಪ್ರಶ್ನಿಸಿದ್ದ. ಈ ವೇಳೆ ಆಟೊ ಚಾಲಕ ಆತನಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ.
ಬಳಿಕ ಇಬ್ಬರ ನಡುವೆ ಘರ್ಷಣೆ ಉಂಟಾಗಿದೆ. ಚಾಲಕನಿಗೆ ಇರಿದ ಗಾಯಗಳಾಗಿದ್ದು, ಯಾವ ವಸ್ತುವಿನಿಂದ ಇರಿದಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.