ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತಪಟ್ಟವರು ಥಾಣೆ ನಿವಾಸಿ ಲತಾ ಎಂದು ತಿಳಿದು ಬಂದಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ವಿವರ : ಪಿರ್ಯಾದಿದಾರರಾದ ಭಾಸ್ಕರ (64), ಥಾಣೆ ಇವರ ಹೆಂಡತಿ ಲತಾ (53) ರವರು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯಲ್ಲಿ ಪಿರ್ಯಾದಿದಾರರೊಂದಿಗೆ ವಾಸ ಮಾಡಿಕೊಂಡಿದ್ದು, ದಿನಾಂಕ 08/08/2025 ರಂದು ಬೆಳಿಗ್ಗೆ 7:30 ಗಂಟೆಗೆ ಮಹಾರಾಷ್ಟ್ರದಲ್ಲಿರುವ ತನ್ನ ವಾಸದ ಮನೆಯಲ್ಲಿದ್ದ ಸಮಯ ಲತಾ ರವರು ಪಿರ್ಯಾದಿದಾರರಲ್ಲಿ ತಾನು ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಮನೆಗೆ ವಾಪಾಸು ಬಾರದೇ ಇದ್ದು ಫೋನ್ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದ್ದರಿಂದ ಪಿರ್ಯಾದಿದಾರರು ಮುಂಬಯಿಯಲ್ಲಿ ಹುಡುಕಾಟ ನಡೆಸಿದಲ್ಲಿ ಪತ್ತೆಯಾಗದೇ ಇದ್ದುದ್ದರಿಂದ ಮುಂಬಯಿ ವೊಡವುಳಿ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿರುತ್ತಾರೆ. ದಿನಾಂಕ 12/08/2025 ರಂದು ಸಂಜೆ 7:30 ಗಂಟೆಗೆ ಪಿರ್ಯಾದಿದಾರರಿಗೆ ಉಡುಪಿ ಆದರ್ಶ ಆಸ್ಪತ್ರೆಯಿಂದ ತನ್ನ ಲತಾ ರವರು ಯಾವುದೋ ವಿಷ ಪದಾರ್ಥ ಸೇವಿಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಬಗ್ಗೆ ತಿಳಿಸಿದಂತೆ ಪಿರ್ಯಾದಿದಾರರು ಉಡುಪಿ ಆದರ್ಶ ಆಸ್ಪತ್ರೆಗೆ ಬಂದಾಗ ಹೆಂಡತಿ ತೀವ್ರ ಅಸ್ವಸ್ಥರಾಗಿದ್ದು, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಯ ಬಗ್ಗೆ ದಿನಾಂಕ 13/08/2025 ರಂದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಲತಾ ರವರು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 30/08/2025 ರಂದು 01:00 ಗಂಟೆಗೆ ಮೃತಪಟ್ಟಿರುವುದಾಗಿದೆ. ಮೃತರು ತನ್ನ ಮಗ ಅಮಿತ್ ಗೆ ಸರಿಯಾದ ಉದ್ಯೋಗ ಇಲ್ಲದೇ ಇದ್ದ ಬಗ್ಗೆ ಮನನೊಂದು ವಿಷಪ್ರಶಾನ ಮಾಡಿ ಮೃತಪಟ್ಟಿರುವುದಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 72/2025 , ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ