Home Crime ಅಕ್ರಮ ಮದ್ಯ ಉತ್ಪಾದನೆ : ಇಬ್ಬರು ಅರೆಸ್ಟ್…!!

ಅಕ್ರಮ ಮದ್ಯ ಉತ್ಪಾದನೆ : ಇಬ್ಬರು ಅರೆಸ್ಟ್…!!

ಮಂಗಳೂರು: ಅಕ್ರಮ ಮದ್ಯ ಉತ್ಪಾದನೆಯಲ್ಲಿ ತೊಡಗಿದ್ದ ಮನೆಯ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನುಷ್ ಆರ್ (24) ಎಂದು ಗುರುತಿಸಲಾಗಿದೆ.

ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವಿನಲ್ಲಿರುವ ಶ್ರೀ ದುರ್ಗಾ ಕಾಳಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮನೆಯಲ್ಲಿ ಥಾಮಸ್ ಮತ್ತು ಮಣಿಕುಟ್ಟನ್ ಜೊತೆಗೆ ಈ ಇಬ್ಬರು ಅಕ್ರಮ ಮದ್ಯ ವ್ಯವಹಾರದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.