Home Crime ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು..!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು..!

ಕೊಲ್ಲೂರು: ಜಡ್ಕಲ್ ಗ್ರಾಮದ ಬೈಂದೂರು ನಿವಾಸಿ ನಾರಾಯಣ ನಾಯ್ಕ (52) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರ ಅಳಿಯನಾದ ಬಿ.ಆರ್. ಪ್ರಶಾಂತ ನಾಯ್ಕ (27) ಅವರು ನೀಡಿದ ದೂರಿನ ಪ್ರಕಾರ, ಮೇ 6ರಂದು ಬೆಳಿಗ್ಗೆ 10:30ರ ಸುಮಾರಿಗೆ ನಾರಾಯಣ ನಾಯ್ಕ ಅವರು ಸಂಬಂಧಿಕರಾದ ಜಲಜಾ ಅವರಿಗೆ ಕರೆ ಮಾಡಿ, ತಾನು ದೊಡ್ಡಬಾಳೆ ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಈ ಮಾಹಿತಿ ಮೇರೆಗೆ ಪ್ರಶಾಂತ ನಾಯ್ಕ ಹಾಗೂ ಕುಟುಂಬದವರು ಕಾಡಿನಲ್ಲಿ ಹುಡುಕಾಟ ನಡೆಸಿದಾಗ, ನಾರಾಯಣ ನಾಯ್ಕ ಅವರು ಮರದ ಕೆಳಗೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಅಂಬುಲೆನ್ಸ್ ಮೂಲಕ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಬೆಳಗಿನ ಜಾವ 12:10ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ.

ವೈಯಕ್ತಿಕ ಸಮಸ್ಯೆಯಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.