Home Crime ಬೈಂದೂರು: ಮನೆ ಬೀಗ ಮುರಿದು ₹6 ಲಕ್ಷ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿ...

ಬೈಂದೂರು: ಮನೆ ಬೀಗ ಮುರಿದು ₹6 ಲಕ್ಷ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿ ಬಂಧನ…!!

ಬೈಂದೂರು: ಮನೆ ಬೀಗ ಮುರಿದು ₹6 ಲಕ್ಷ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿ ಬಂಧನಬೈಂದೂರು: ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯಲ್ಲಿ ನಡೆದಿದ್ದ ₹6 ಲಕ್ಷ ನಗದು ಕಳವು ಪ್ರಕರಣವನ್ನು ಬೈಂದೂರು ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ದಿನಾಂಕ 23-04-2026 ರಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯ ಅವಧಿಯಲ್ಲಿ, ರಾಜಸ್ಥಾನ ಮೂಲದ ರಾವಲ್ ಸಿಂಗ್ ಎಂಬವರು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ನಡೆದಿತ್ತು. ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಗೋಡ್ರೇಜ್ ಅಲ್ಮಾರಿಯಲ್ಲಿ ಇರಿಸಿದ್ದ ₹6 ಲಕ್ಷ ನಗದು ಹಣವನ್ನು ಕಳವು ಮಾಡಿದ್ದರು.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಬೈಂದೂರು ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ನೇತೃತ್ವದಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ತನಿಖೆಯ ಭಾಗವಾಗಿ ವಿಶೇಷ ತಂಡ ರಚಿಸಲಾಗಿದ್ದು, ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಕುಮಾರ್ ಬಿ.ವೈ., ನವೀನ್ ಬೋರಕರ ಹಾಗೂ ಸಿಬ್ಬಂದಿಗಳಾದ ಸಂತೋಷ ಕುಮಾರ ಯು., ಚಿದಾನಂದ, ಜಯರಾಮ, ಮಾಳಪ್ಪ ದೇಸಾಯಿ, ಪರಯ್ಯ ಮಠಪತಿ, ಬೈಂದೂರು ವೃತ್ತ ಕಚೇರಿ ಸಿಬ್ಬಂದಿಗಳಾದ ಶಿವಾನಂದ ಹುದ್ದಾರ, ಅಶೋಕ ರಾಥೋಡ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಿಡಿಆರ್ ವಿಭಾಗದ ದಿನೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿತು.


ಈ ಕಾರ್ಯಾಚರಣೆಯಲ್ಲಿ ಮಹೇಂದ್ರ ಸೈನ್ (23), ಜೋಧ್‌ಪುರ ಜಿಲ್ಲೆಯ ಸೇತ್ರಾವ್ ಅಂಚೆ ವ್ಯಾಪ್ತಿಯ ನಿವಾಸಿ, ಪ್ರಸ್ತುತ ಬೈಂದೂರು ಬಂಕೇಶ್ವರದಲ್ಲಿ ವಾಸಿಸುತ್ತಿದ್ದ ಆರೋಪಿಯನ್ನು ದಿನಾಂಕ 07-05-2026 ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಕಳವು ಮಾಡಿದ್ದ ₹6 ಲಕ್ಷ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.