ಮಡಿಕೇರಿ : ಮಡಿಕೇರಿ–ಮಂಗಳೂರು ರಸ್ತೆಯ ತಿರುವಿನಲ್ಲಿ ಸಂಚರಿಸುತ್ತಿದ್ದ ಪೂರ್ಣಿಮಾ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.ಮುಂಜಾನೆ ವೇಳೆ ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಹೃದಯಾಘಾತ ಸಂಭವಿಸಿದ ಶಂಕೆ ವ್ಯಕ್ತವಾಗಿದ್ದು, ಇದರಿಂದ ಬಸ್ ಮೊದಲು ರಸ್ತೆ ಬದಿಯ ಬರೆಯನ್ನು ಗುದ್ದಿ ಬಳಿಕ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವೇಳೆ ಪ್ರಯಾಣಿಕರ ಸ್ಥಿತಿ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




