ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಆಂಡ್ರಾಯ್ಡ್ ಮೊಬೈಲ್‌ನ್ನು ತನಿಖೆಗಾಗಿ ಎಸ್‌ಐಟಿಗೆ ನೀಡಲು ಅಧಿಕಾರಿಗಳು ನೋಟೀಸ್ ನೀಡಿದ್ದರು.




