Home Crime ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಪೊಲೀಸಪ್ಪನ ಬಂಧನ..!!

ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಪೊಲೀಸಪ್ಪನ ಬಂಧನ..!!

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ‌ವಾಗಿ ಮಾತನಾಡಿ ಕಿರುಕುಳ ನೀಡಿದ ಘಟನೆಯ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ತನ್ನ ದಾಂಪತ್ಯದ ಸಮಸ್ಯೆಯ ಬಗ್ಗೆ ಇತ್ತೀಚೆಗೆ ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು ಎಂದು‌ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಅವರು, ಪತಿ ಹಾಗೂ ಪತ್ನಿಯನ್ನು ಠಾಣೆಗೆ ಕರೆಸಿ ಮಾತನಾಡಿ ಪ್ರಕರಣವನ್ನು ಇತ್ಯರ್ಥಗೊಳಿಸಿ ಕಳುಹಿಸಿದ್ದರು ಎನ್ನಲಾಗಿದೆ. ಈ ನಡುವೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿ ಶಾಂತಪ್ಪ ಎಂಬಾತ ಸಂತ್ರಸ್ತ ಮಹಿಳೆ ನೀಡಿದ್ದ ದೂರು ಪ್ರತಿಯಲ್ಲಿದ್ದ ಆಕೆಯ ಮೊಬೈಲ್ ಸಂಖ್ಯೆಯನ್ನು ಪಡೆದು ಆಕೆಗೆ ನಿರಂತರ ಮೆಸೇಜ್ ಮತ್ತು ಕರೆ ಮಾಡಿ ಅಶ್ಲೀಲವಾಗಿ‌ ಮಾತನಾಡುತ್ತಾ, ತನ್ನೊಂದಿಗೆ ಬರುವಂತೆ ಕರೆಯುತ್ತಿದ್ದ ಎಂದು ಮಹಿಳೆ ಸೆ.1ರ ಸೋಮವಾರ ಮೂಡುಬಿದಿರೆ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾದ ಶಾಂತಪ್ಪನ ವಿರುದ್ಧ ಕಾಲ್ ರೆಕಾರ್ಡ್ ಸಹಿತ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಅವರು ಆರೋಪಿ ಶಾಂತಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಾಗೂ ಆತನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.