Home Crime ಮಂಗಳೂರು: ಕುಡುಪು ಬಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ : ಕೊಲೆ ಶಂಕೆ…!!

ಮಂಗಳೂರು: ಕುಡುಪು ಬಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ : ಕೊಲೆ ಶಂಕೆ…!!

ಮಂಗಳೂರು: ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.

ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.

ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.