Home Latest ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ ಆಟಗಳಿಗೆ ಚಾಲನೆ…!!

ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ ಆಟಗಳಿಗೆ ಚಾಲನೆ…!!

ಮಲ್ಪೆ: ಉಡುಪಿ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ ಆಟಗಳಿಗೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.

ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಬಿ. ಕಾಂಚನ್ ರಿಬ್ಬನ್ ಕತ್ತರಿಸುವ ಮೂಲಕ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ “ಪ್ರತಿಭೆ ನಿಮ್ಮದು – ವೇದಿಕೆ ನಮ್ಮದು” ಪ್ರತಿಭಾ ಪ್ರದರ್ಶನ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟದ ಅಧ್ಯಕ್ಷೆ ವಾಸಂತಿ ರಾವ್ ಕೊರಡ್ಕಲ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸರಳಾ ಬಿ. ಕಾಂಚನ್, ದೇವಸ್ಥಾನದ ವತಿಯಿಂದ ಕುಟುಂಬ ಹಾಗೂ ಸಮಾಜದ ಸರ್ವರ ಸಹಭಾಗಿತ್ವದಲ್ಲಿ ಆಯೋಜಿಸಲಾಗುತ್ತಿರುವ ಮಹಾ ರುದ್ರಯಾಗ ಯಶಸ್ವಿಯಾಗಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಾಜಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಮಹಾ ರುದ್ರಯಾಗ ಸಮಿತಿಯ ಪ್ರಧಾನ ಸಂಚಾಲಕ ತಾರನಾಥ ಪೂಜಾರಿ, ಕೆ. ಕೃಷ್ಣಮೂರ್ತಿ ಆಚಾರ್ಯ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು, ರಮೇಶ್ ತಿಂಗಳಾಯ, ಪದಾಧಿಕಾರಿಗಳಾದ ಡಾ. ವಿಜಯೇಂದ್ರ ವಸಂತ್, ಟಿ. ರಾಘವೇಂದ್ರ ರಾವ್ ಕೊಡವೂರು, ರಾಜ್ ಎ. ಸೇರಿಗಾರ, ಪೀಟರ್ ಸಿಕ್ವೇರಾ, ರೂಫಸ್ ಸಿಕ್ವೇರಾ, ಹೇಮಾವತಿ ಸಾಲ್ಯಾನ್, ಕೇಶವ ಕೋಟ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.