ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.
ಕೊಲೆಯಾದ ವ್ಯಕ್ತಿ ಬಸವರಾಜ್ ತಳವಾರ (34) ಎಂದು ತಿಳಿಯಲಾಗಿದೆ.
ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದ ಬಸವರಾಜ್ ತಳವಾರ್ ಮತ್ತು ಘೂಳೇಶ್ ನಡುವೆ ಜಮೀನು ವಿಷಯವಾಗಿ ಗಲಾಟೆಯಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಬಸವರಾಜ್‌ಗೆ ಚಾಕುವಿನಿಂದ ಇರಿದಿದ್ದಾನೆ.
ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಸವರಾಜ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





