Home Latest ಬೈಕ್‌ಗೆ ಕಾರು ಡಿಕ್ಕಿ: ಸವಾರನಿಗೆ ಗಾಯ..!

ಬೈಕ್‌ಗೆ ಕಾರು ಡಿಕ್ಕಿ: ಸವಾರನಿಗೆ ಗಾಯ..!

ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಶೆಟ್ಟಿಬೆಟ್ಟು–ಪರ್ಕಳ ಕೂಡು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದಾರೆ. ವೇಣುಗೋಪಾಲನ್ ನಾಯರ್ (63) ಅವರು  ಮೋಟಾರ್‌ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಪರ್ಕಳ ಮಾರ್ಕೆಟ್‌ ರಸ್ತೆ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪರಿಣಾಮ ಅವರು ಕಾರಿನ ಬೊನೆಟ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದ್ದು, ಎಡಕೈ ಮೊಣಕೈಗೆ ಗಾಯಗಳಾಗಿವೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.