Home Crime ಉಡುಪಿ ಜಿಲ್ಲೆಯಲ್ಲಿ ಎರಡು ಅಸ್ವಾಭಾವಿಕ ಮರಣ ಪ್ರಕರಣಗಳು…!!

ಉಡುಪಿ ಜಿಲ್ಲೆಯಲ್ಲಿ ಎರಡು ಅಸ್ವಾಭಾವಿಕ ಮರಣ ಪ್ರಕರಣಗಳು…!!

ಮಲ್ಪೆ : ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಗೋಪಾಲ ಕೃಷ್ಣ ನಾಯಕ್ (60) ಎಂಬವರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಬಿಪಿ ಹಾಗೂ ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ ಠಾಣಾ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಸುನಿಲ್ (32) ಅವರು ಬೋನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಶುಕ್ರವಾರ ರಾತ್ರಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.