ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಅನ್ನಪೂರ್ಣ ಹೋಟೆಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಯುತ್ತಿದ್ದ ಮಾಹಿತಿ ಮೇರೆಗೆ ಪಿಎಸ್‌ಐ ಸುನೀಲ ಕುಮಾರ್ ಬಿ.ವೈ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಈ ವೇಳೆ ಆರೋಪಿತ ಮಂಜುನಾಥ ಗಾಣಿಗನನ್ನು ವಶಕ್ಕೆ ಪಡೆದು, ರೂ.550 ನಗದು, ಮಟ್ಕಾ ಚೀಟಿ ಹಾಗೂ ಬಾಲ್ ಪೆನ್ ವಶಪಡಿಸಿಕೊಳ್ಳಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




