ಶಿವಮೊಗ್ಗ, : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ದಾವಣಗೆರೆಯ ನ್ಯಾಮತಿಯ ಹಳೇಜೋಗದ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗದಿಂದ ತನ್ನ ಗ್ರಾಮ ಹಳೇಜೋಗಕ್ಕೆ ಶಿವಕುಮಾರ್ ತೆರಳುತ್ತಿದ್ದರು. ಈ ವೇಳೆ ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಶಿವಕುಮಾರ್ ಸಂಚರಿಸುತ್ತಿದ್ದ ಬೈಕ್ ಕೊಮ್ಮನಾಳು ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಶಿವಕುಮಾರ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




