Home Crime ಕೋಟ : ಬಾವಿಗೆ ಹಾರಿ ವ್ಯಕ್ತಿಯೊಬ್ಬರು ‌ಆತ್ಮಹತ್ಯೆ….!!

ಕೋಟ : ಬಾವಿಗೆ ಹಾರಿ ವ್ಯಕ್ತಿಯೊಬ್ಬರು ‌ಆತ್ಮಹತ್ಯೆ….!!

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೊಬ್ಬರು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಬಸವ ಪೂಜಾರಿ‌ ಎಂದು ತಿಳಿಯಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ: ಪಿರ್ಯಾದಿ ಸುರೇಶ ಪೂಜಾರಿ(50) ಕೋಟತಟ್ಟು ಗ್ರಾಮ, ಬ್ರಹ್ಮಾವರ ತಾಲೂಕು ಇವರ ತಂದೆ ಬಸವ ಪೂಜಾರಿ (79) ಇವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಅಸೌಖ್ಯದಿಂದ ಕುಂದಾಪುರ ಎನ್‌ ಆರ್‌ ಆಚಾರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದಾಗಿದೆ . ದಿನಾಂಕ 30.01.2026ರಂದು 21.00 ಗಂಟೆಯಿಂದ ದಿನಾಂಕ 31.01.2026 ರಂದು ಬೆಳಿಗ್ಗೆ 01.00 ಗಂಟೆಯ ಮಧ್ಯಾವಧಿಯಲ್ಲಿ ಬಸವ ಪೂಜಾರಿ ಇವರು ಅವರಿಗಿದ್ದ ನರದ ಸಮಸ್ಯೆಯಿಂದ ಮನನೊಂದು ಅಥವಾ ಇನ್ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮದ ರಾಮ ಮಂದಿರ ಬಳಿ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆ ಯು.ಡಿ.ಆರ್ 04/2026 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.