Home Karavali Karnataka ಕಾರ್ಕಳ: ಸೆ. 7ಕ್ಕೆ ‘ಪತ್ರಿಕಾ ಭವನ’ದ ಉದ್ಘಾಟನೆ

ಕಾರ್ಕಳ: ಸೆ. 7ಕ್ಕೆ ‘ಪತ್ರಿಕಾ ಭವನ’ದ ಉದ್ಘಾಟನೆ

ಕಾರ್ಕಳ: ತಾಲೂಕು ಕಚೇರಿಯ ಆವರಣದಲ್ಲಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನವನ್ನು ಸೆ. 7ರ ಭಾನುವಾರ ಅಪರಾಹ್ನ 3.30ಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ, ಬೆಂಗಳೂರು ಹಾಗೂ ಎಸ್‌.ಡಿ.ಸಿ.ಸಿ. ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ತಿಳಿಸಿದ್ದಾರೆ. ಬಳಿಕ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಕಳ ತಹಶೀಲ್ದಾರರಾದ ಪ್ರದೀಪ್ ಆರ್., ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ನ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಕ್ವಾರಿ ಆಂಡ್ ಕ್ರಷರ್ ಓನರ್ ಅಸೋಷಿಯೆಷನ್ ಬೆಂಗಳೂರು ಇದರ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೊಳಿ, ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷಾ ಪ್ರೀಯಂವದ, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಎಂ.ವಿ., ವಾರ್ತಾಧಿಕಾರಿ ಮಂಜುನಾಥ್ ಬಿ., ಕಾರ್ಕಳ ಪುರಸಭಾಧ್ಯಕ್ಷ ಯೋಗೀಶ್ ದೇವಾಡಿಗ, ಉದ್ಯಮಿಗಳಾದ ಬೋಳ ಪ್ರಶಾಂತ್ ಕಾಮತ್, ಸುಜಯ ಕುಮಾರ್ ಶೆಟ್ಟಿ, ಮಹಮ್ಮದ್ ಗೌಸ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.