ಉಡುಪಿ: ಬಿಲ್ಡರ್ಸ್ ಎಸೋಸಿಯೇಶನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಉದ್ಯಮಿ ವಿ. ಪ್ರಸಾದ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಕಾಯದರ್ಶಿಯಾಗಿ ಕೆ. ವರುಣ್ ಶೆಟ್ಟಿ, ಕೋಶಾಧಿಕಾರಿಯಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆಯಾಗಿದ್ದಾರೆ.
ಜೊತೆ ಕಾರ್ಯದರ್ಶಿಗಳಾಗಿ ಏಕನಾಥ ಬೋಳಾರ್ ಹಾಗೂ ಅಶ್ವಿನ್ ಕುಂದರ್ ನೇಮಕಗೊಂಡಿದ್ದಾರೆ. ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸಿದ್ದರಾಜು, ಜನರಲ್ ಕೌನ್ಸಿಲ್ ಸದಸ್ಯರಾಗಿ ಎನ್.ಎಂ. ಹೆಗ್ಡೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕೆ. ಪ್ರಕಾಶ್ ಬೆಟ್ಟಿನ್ ಮತ್ತು ರಾಜಗೋಪಾಲ್ ಎಸ್. ಆಯ್ಕೆಯಾಗಿದ್ದು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ. ಅರುಣ್ ಕುಮಾರ್ ಹೆಗ್ಡೆ, ಹರಿಪ್ರಸಾದ್ ರೈ, ರಂಜನ್ ಕೆ. ಹಾಗೂ ಎಸ್. ಉಮರ್ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಸಂಘದ ಸದಸ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಶ್ರಮಿಸುವಂತೆ ಶುಭ ಹಾರೈಸಿದರು.




