ಕೊಡವೂರು: ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನಲ್ಲಿ ಮೇ 15ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಹಾರುದ್ರಯಾಗ ಹಾಗೂ ಸಂಕಲ್ಪ ಮಹಾಪೂಜೆ ಸಮಾರಂಭ ಆಯೋಜಿಸಲಾಗಿದೆ.
ಮೇ 15ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಬಳಿಕ ಸಂಜೆ ವಿವಿಧ ಪೂಜಾ ವಿಧಿವಿಧಾನಗಳು ನಡೆಯಲಿವೆ.
ಮೇ 16, 17 ಹಾಗೂ 18ರಂದು ಪ್ರತಿದಿನ ಬೆಳಗ್ಗೆ 8.30ರಿಂದ ಸಂಜೆ 6 ಗಂಟೆಯವರೆಗೆ ವಿಶೇಷ ಪೂಜೆ, ಹೋಮ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಮೇ 19ರಂದು ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಪೂರ್ಣಾಹುತಿ ಕಾರ್ಯಕ್ರಮ ಜರುಗಲಿದ್ದು, ನಂತರ ಮಹಾಪೂಜೆ ನೆರವೇರಲಿದೆ. ಇದೇ ದಿನ ಬೆಳಗ್ಗೆ 11 ಗಂಟೆಗೆ ಮಹಾ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.




