ಆಂಧ್ರ ಪ್ರದೇಶ : ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ World ನಡೆದಿದ್ದು ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿಯಲಾಗಿದೆ
ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ನಡೆದಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.