Home Crime ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್‌ : ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ : ವ್ಯಕ್ತಿ...

ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್‌ : ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ : ವ್ಯಕ್ತಿ ಮೃತ್ಯು…!!

ಕಾರ್ಕಳ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಮಾಧವ ಪ್ರಕಾಶ್ ಕ್ಯಾಶೂ ಫ್ಯಾಕ್ಟರಿ ಎದುರು ಸಂಭವಿಸಿದೆ.

ಮೃತರನ್ನು ಕರಿಯಕಲ್ಲು ಮಿಯಾರು ನಿವಾಸಿ ಪ್ರಸಾದ್ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಈ ಸಂಬಂಧ ಮೃತರ ಸಹೋದರ ರವೀಂದ್ರ ಶೆಟ್ಟಿ (51) ಅವರು ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಮೇ 12ರಂದು ರಾತ್ರಿ 10.30ರಿಂದ 11 ಗಂಟೆಯ ನಡುವಿನ ಅವಧಿಯಲ್ಲಿ ಪ್ರಸಾದ್ ಶೆಟ್ಟಿ ರಸ್ತೆ ದಾಟುತ್ತಿದ್ದ ವೇಳೆ, ಅಪರಿಚಿತ ವಾಹನದ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಪ್ರಸಾದ್ ಶೆಟ್ಟಿ ರಸ್ತೆ ಮೇಲೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.