Home Crime ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ…!!

ಕಂದಾಯ ಅಧಿಕಾರಿ ಲೋಕಾಯುಕ್ತ ಬಲೆಗೆ…!!

ಚಿಕ್ಕಮಗಳೂರು : ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ವೇಳೆ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತರೀಕೆರೆ ತಾಲೂಕಿನ ಲಿಂಗದಹಳ್ಳಿ ನಾಡಕಚೇರಿ ರೆವಿನ್ಯೂ ಇನ್ಸ್‌ಪೆಕ್ಟರ್‌ ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.

ಲಂಚ ನೀಡಲು ನಿರಾಕರಿಸಿದ್ದ ರೈತರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ಬುಧವಾರ ರೈತರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಬಂಧಿತ ಅಧಿಕಾರಿಯ ವಿಚಾರಣೆ ಮುಂದುವರಿಸಲಾಗಿದೆ.