ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವತಿಯಿಂದ ಶುಕ್ರವಾರ ಸೈಂಟ್ ಥಾಮಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಬೈಂದೂರು ವಲಯದ ಶಿಕ್ಷಕರ ದಿನಾಚರಣೆ ಕಾಯಕ್ರಮವು ಸಂಭ್ರಮದಲ್ಲಿ ನಡೆಯಿತು.
ಶಾಸಕ ಗುರುರಾಜ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ
ಸರಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳು ವಿದ್ಯಾರ್ಥಿ ಸಂಖ್ಯೆಗಳಲ್ಲಿ, ಗುಣಮಟ್ಟದ ಶಿಕ್ಷಣಗಳಲ್ಲಿ ಹಾಗೂ ಫಲಿತಾಂಶಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಈ ಸಂದರ್ಭದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೆಲವು ಪ್ರಾಮಾಣಿಕ ಶಿಕ್ಷಕರು ಹೋರಾಡುತ್ತಿದ್ದಾರೆ. ಅವರಿಂದಾಗಿಯೇ ಕೆಲವು ಸರಕಾರಿ ಶಾಲೆಗಳು ಉಳಿದಿವೆ. ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯವಾದುದು
ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶ್ರಮಿಸಿರುವ ಎಲ್ಲಾ ನಿವೃತ್ತ ಶಿಕ್ಷಕರಿಗಾಗಿ ಸೆಪ್ಟೆಂಬರ್.21ರಂದು ನಿವೃತ್ತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು.
ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು.
ಬೈಂದೂರು ವಲಯದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗಾಗಿ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ. ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಕ್ಷೇತ್ರದ ಒಬ್ಬ ಉತ್ತಮ ಶಿಕ್ಷಕನು ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣನಾಗುತ್ತಾನೆ” ಎಂದು ಶುಭ ಹಾರೈಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಮಾತನಾಡಿ ಶಿಕ್ಷಕ ದಿನಾಚರಣೆಗೆ ಶುಭ ಹಾರೈಸಿ ಮುಂದಿನ ದಿನಗಳಲ್ಲಿ ಮಾಹಿತಿ ಹಕ್ಕುಗಳ ಮೂಲಕ ಸರಕಾರಿ ನೌಕರರಿಗೆ ತೊಂದರೆ ಕೊಟ್ಟರೆ ಅದನ್ನು ಎಂದಿಗೂ ಸಹಿಸುವುದಿಲ್ಲ ಸರಕಾರಿ ನೌಕರ ಕುಂದು ಕೊರತೆ ಬಗ್ಗೆ ವಿವರಿಸಿದರು.
ತಹಶೀಲ್ದಾರ್ ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಿಲಿಪ್ ನೆಲ್ಲಿವಿಲ್ಲಾ, ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ವಿಜಯಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಯಾನಂದ ಪಟಗಾರ್, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷೆ ಸಾರಿಕಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಭಡ್ತಿ ಹೊಂದಿದ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೇಶವ ನಾಯಕ್, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ದೇವಾಡಿಗ, ರತ್ತುಬಾಯಿ ಜನತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಆನಂದ ಮದ್ದೋಡಿ
ಉಪಸ್ಥಿತರಿದ್ದರು.
ಪ್ರಭಾರ ಸಮನ್ವಯ ಅಧಿಕಾರಿ ಪ್ರದೀಪ್ ಕುಮಾರ್ ಸ್ವಾಗತಿಸಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ನಾಯಕ್ ವಂದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಹಾಗೂ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

