ಮಂಗಳೂರು: ವಿಟ್ಲ ಠಾಣೆಯಲ್ಲಿ 2006ರಲ್ಲಿ ನಡೆದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ 19ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೇವರಾಜ್(49 ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ 19ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಬಂಧನಕ್ಕೆ ನ್ಯಾಯಾಲಯವು LPC ವಾರೆಂಟ್ ಹೊರಡಿಸಿತ್ತು. ಈತನ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಶ್ರೀ ತಿರುಪತಿ ತಿರುಮಲ ದೇವಸ್ಥಾನದ ಬೆಟ್ಟದಲ್ಲಿ ವಾಹನ ಪಾರ್ಕಿಂಗ್ ಕೆಲಸ ಮಾಡಿಕೊಂಡಿರುವ ಬಗ್ಗೆ ತಿಳಿದು ಬಂದಿದೆ.
ಅಲ್ಲಿಗೆ ಹೋದ ಪೊಲೀಸರು ಸೆ. 5ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಸೆ. 6ರಂದು ಮಂಗಳೂರಿಗೆ ಕರೆತಂದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.