Home Crime ಬಂಟ್ವಾಳ : ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಕೆ ಆರೋಪ : ಪ್ರಕರಣ...

ಬಂಟ್ವಾಳ : ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಕೆ ಆರೋಪ : ಪ್ರಕರಣ ದಾಖಲು…!!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡ ಇದಾಗಿದ್ದು, ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಝಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದ ದೂರಿನಂತೆ ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.