Home Crime ಪೆರಾಜೆ ಸಮೀಪ ಕಾರು-ಸ್ಕೂಟಿ ಢಿಕ್ಕಿ…!!

ಪೆರಾಜೆ ಸಮೀಪ ಕಾರು-ಸ್ಕೂಟಿ ಢಿಕ್ಕಿ…!!

ಸುಳ್ಯ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಸಂಭವಿಸಿದೆ.

ಗಾಯಗೊಂಡ ಸ್ಕೂಟಿ ಸವಾರ ಬಿಳಿಯಾರು ನಿವಾಸಿ ಎಂದು ತಿಳಿದುಬಂದಿದ್ದು, ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಂಡ್ಯ ಮೂಲದವರ ಕಾರು ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.