Home Crime 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

ಕಾಪು:  ಕಳೆದ 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ರೌಡಿಶೀಟರ್ ಓರ್ವನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಭಿಜಿತ್ (34), ತಂದೆ ಜಯ ಟಿ. ಕುಂದರ್, ಶಾಲಿನಿ ನಿವಾಸ, ಮೂಲ್ಕಿ, ಮಂಗಳೂರು ತಾಲೂಕು ಎಂದು ಗುರುತಿಸಲಾಗಿದೆ. ಈತನ ವಿರುದ್ಧ IPC ಕಲಂ 341, 354(A), 354(B) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮಾನ್ಯ ಪೊಲೀಸ್ ಉಪಾಧೀಕ್ಷಕರು ಕಾರ್ಕಳ ಉಪವಿಭಾಗ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಕಾಪು ವೃತ್ತ ಇವರ ಮಾರ್ಗದರ್ಶನದಲ್ಲಿ, ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ (ಕಾ&ಸು) ಹಾಗೂ ಶುಭಕರ ಪಿ.ಎಸ್‌.ಐ (ತನಿಖೆ) ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ ಮೊಹಮ್ಮದ್ ರಫೀಕ್ ಹಾಗೂ ಪಿಸಿ ರಾಘು ಅವರು ಮೇ 15ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ

ಆರೋಪಿತನ ವಿರುದ್ಧ ಮೈಸೂರು ನರಸಿಂಹರಾಜಪುರ ಹಾಗೂ ಬಜ್ಪೆ ಪೊಲೀಸ್ ಠಾಣೆಗಳಲ್ಲಿ ಸಹ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನನ್ನು ಮೇ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಮೇ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.