Home Latest ಕೊಡವೂರು ಮಹಾರುದ್ರಯಾಗ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮನ

ಕೊಡವೂರು ಮಹಾರುದ್ರಯಾಗ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮನ

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಸಂಜೆ ಆಗಮಿಸಿದರು.

ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಸಾದ್ ರಾಜ್ ಕಾಂಚನ್‌ ಹಾಗೂ‌ ಸಮಿತಿ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಸಚಿವರು ಶ್ರೀ‌ಶಂಕರನಾರಾಯಣ ದೇವರ ದರ್ಶನ ಪಡೆದರು. ಸಚಿವರಿಗೆ ಶಾಲು ಹೊದಿಸಿ ದೇವರ ವಿಗ್ರಹವನ್ನು ಕೊಟ್ಟು ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು, ಮಹಾರುದ್ರ ಯಾಗ ಸಮಿತಿಯ ಪ್ರಧಾನ ಸಂಚಾಲಕರಾದ ತಾರನಾಥ ಪೂಜಾರಿ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು ರಮೇಶ್ ತಿಂಗಳಾಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.