Home Dskshina Kannada ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ…!!

ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ…!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು.

ಕಾವಳಪಡೂರು ಗ್ರಾಮದ ಮಧ್ವ ಬರ್ಕಟ್ಟ, ಎಂಬಲ್ಲಿ ಕವಿತ ಸೇಸಪ್ಪ ಪೂಜಾರಿ ಎಂಬುವರ ಮನೆಗೆ ಸಿಡಿಲು ಬಡಿದು, ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಪಾಯ ಇರುವುದಿಲ್ಲ. ಕಡೇಶಿವಾಲಯ ಗ್ರಾಮದ ಅಣ್ಣು ಪೂಜಾರಿ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿ ಆಗಿರುತ್ತದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.

ಪೆರಾಜೆ ಗ್ರಾಮದ ಕೊಂಕಣಪದವು ಮನೆಯ (ಮನೆ ಸಂಖ್ಯೆ 1-19) ಲಲಿತ ಕೋಂ ಪರಮೇಶ್ವರ ನಾಯ್ಕ್ ಅವರ ಹಂಚಿನ ಮನೆಯ ಮೇಲೆ ಹಲಸಿನ ಮರ ಬಿದ್ದು ಮನೆಗೆ ಭಾಗಶ: ಹಾನಿಯಾಗಿರುತ್ತದೆ ಯಾವುದೇ ಪ್ರಾಣಹಾನಿ ಆಗಿರುವುದಿಲ್ಲ.